
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆ. 26 ಮತ್ತು 27ರಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ ಮಳೆ ಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.



















































































