
ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ.
ಬಾಗಲಕೋಟೆ ಬೀದರ್ ಗದಗ ಕಲಬುರಗಿ ಕೊಪ್ಪಳ ರಾಯಚೂರು ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯ ಜೊತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು ,ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.






















