
ರಾಜ್ಯದ ಕರಾವಳಿ ,ಮಲೆನಾಡು ಭಾಗಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು ,ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಗದಗ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ,ಬೆಂಗಳೂರು ಗ್ರಾಮಾಂತರ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದ ಉಳಿದ ಕಡೆ ಮೋಡ ಕವಿದ ವಾತಾವರಣವಿರಲಿದೆ.





















































































