
ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಶಿವಮೊಗ್ಗ ಚಿಕ್ಕಮಗಳೂರು ಹಾಸನ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.






















































































