
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಪ್ಟೆಂಬರ್ 4 ಮತ್ತು 5 ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಸೆ.4ರಂದು ವಿಜಯಪುರ, ಗದಗ, ರಾಯಚೂರು, ಬೆಳಗಾವಿ ,ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಗಾಳಿಯ ಜೊತೆ ಮಳೆಯಾಗಲಿದೆ.























































































