
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಆಗಸ್ಟ್ 12ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಬೀದರ್ ಕಲಬುರಗಿ ವಿಜಯಪುರ, ಗದಗ, ಹಾವೇರಿ ,ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ,ಬೆಂಗಳೂರು ,ಚಾಮರಾಜನಗರ, ಚಿತ್ರದುರ್ಗ ,ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.



























































