
ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 8 ರಿಂದ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗದಲ್ಲಿ ಸಂಜೆಯ ವೇಳೆಗೆ ಮಳೆಯಾಗಲಿದೆ. ಬೆಳಗಾವಿ ಧಾರವಾಡ ಹಾವೇರಿ ಗದಗ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




































