
ರಾಜ್ಯದಲ್ಲಿ ನೈರುತ್ಯ ಮಾರುತ ದುರ್ಬಲ ಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 11ರಂದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಸಣ್ಣಗೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ,ಗದಗ, ಕೊಪ್ಪಳ, ಧಾರವಾಡ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.




































