
ರಾಜ್ಯದಲ್ಲಿ ವಾಯುಭಾರ ಕುಸಿತದ ಕಾರಣ ಕರಾವಳಿ ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿವೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗಲಿದೆ. ಉಡುಪಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.






























































































































