
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ಉತ್ತರಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್ ,ಕೊಪ್ಪಳ, ವಿಜಯಪುರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.






























































































































