
ಸೆ .21 ಮತ್ತು ಸೆಪ್ಟೆಂಬರ್ 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಗದಗ ,ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್ ,ಧಾರವಾಡ, ಕಲಬುರಗಿ, ರಾಯಚೂರು ,ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ,ಚಿಕ್ಕಬಳ್ಳಾಪುರ, ಕೋಲಾರ, ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ಚಿತ್ರದುರ್ಗ, ದಾವಣಗೆರೆ, ಹಾಸನ ,ಕೊಡಗು, ಮಂಡ್ಯ ,ಮೈಸೂರು ,ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.






























































































































