
ರಾಜ್ಯದಲ್ಲಿ ಸೆ. 23 ,24 ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ.24ರಂದು ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ,ವಿಜಯಪುರ ,ಬೆಳಗಾವಿ ,ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.































































































































