
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು,ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಚಿಕ್ಕಮಗಳೂರು ಕೊಡಗು ಹಾಸನ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.































































































































