
ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ. ಹಾವೇರಿ ಬೆಳಗಾವಿ ಧಾರವಾಡ ಮತ್ತು ಗದಗ ಜಿಲ್ಲೆಗಳ ಭಾಗಗಳಲ್ಲಿ ತಣ್ಣಗೆ ಮಳೆಯಾಗಲಿದೆ.































































































































