
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 28 ಮತ್ತು 29ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ. ಉತ್ತರ ಒಳನಾಡಿನ ವಿಜಯಪುರ ಬಾಗಲಕೋಟೆ ಬೆಳಗಾವಿ, ಧಾರವಾಡ, ಗದಗ ,ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಲಿದೆ.































































































































