
ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ,ಬೆಂಗಳೂರು ಗ್ರಾಮಾಂತರ, ರಾಮನಗರ ,ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಮಂಡ್ಯ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.



































