
ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಣ್ಣಗೆ ಮಳೆಯಾಗಲಿದೆ. ಬಾಗಲಕೋಟೆ ,ಬೀದರ್, ಕಲಬುರಗಿ, ಕೊಪ್ಪಳ, ಗದಗ, ವಿಜಯಪುರ, ಯಾದಗಿರಿ,ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.






















