
ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















