
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಅಕ್ಟೋಬರ್ 9 ಮತ್ತು 10 ರಂದು ಗುಡುಗು ಸಹಿತ ಮಳೆಯಾಗಲಿದೆ.
ಚಾಮರಾಜನಗರ ,ಚಿಕ್ಕಮಗಳೂರು, ಹಾಸನ ,ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















