
ರಾಜ್ಯದಲ್ಲಿ ಇಂದು ಮತ್ತೆ ನಾಳೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಗದಗ ಹಾವೇರಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ, ,ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.













































































































