
ರಾಜ್ಯದಲ್ಲಿ ಮುಂಗಾರು ದುರ್ಬಲ ಗೊಂಡಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೋಲಾರ, ಚಾಮರಾಜನಗರ ಹಲವೆಡೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಚಿತ್ರದುರ್ಗ ,ಕೋಲಾರ, ಚಾಮರಾಜನಗರ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ,ದಾವಣಗೆರೆ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.






















