
ರಾಜ್ಯದಲ್ಲಿ ವಾಯುಭಾರ ಕುಸಿತದ ಕಾರಣ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ. ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ ,ಬಳ್ಳಾರಿ ,ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮೈಸೂರು ,ಮಂಡ್ಯ ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.






















