
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು ,ಹಾಸನ ,ಮಂಡ್ಯ, ರಾಮನಗರ, ತುಮಕೂರು ,ಬೆಂಗಳೂರು ,ಕೋಲಾರ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.






















