
ರಾಜ್ಯದಲ್ಲಿ ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳ್ಳೆ ನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಯಚೂರು, ವಿಜಯಪುರ, ಬಾಗಲಕೋಟೆ ,ಬೆಳಗಾವಿ, ಬೀದರ್, ಧಾರವಾಡ, ಗದಗ ,ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.






















