
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ.
ಕೊಡಗು ,ಹಾಸನ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಳಗಾವಿ, ಹಾವೇರಿ, ಗದಗ, ಧಾರವಾಡ ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದೆ.






















