
ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಭಾಗಗಳಲ್ಲೂ ಮಳೆ ಮುಂದುವರೆಯಲಿದೆ. ಕರಾವಳಿ ಭಾಗಗಳಲ್ಲಿ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ ,ಗದಗ ,ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.






















