
ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 26 ಮತ್ತು 27ರಂದು ರಾಜ್ಯದ ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ. ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹಾವೆ ಇರಲಿದ್ದು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆಯೊಂದಿಗೆ ಗಾಳಿ ಬೀಸುವ ಸಾಧ್ಯತೆ ಇದೆ.






















