
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಅಕ್ಟೋಬರ್ 31ರಂದು ದಕ್ಷಿಣ ಕನ್ನಡ, ಉಡುಪಿ ,ಉತ್ತರ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ,ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
























