
ರಾಜ್ಯದಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಬಹುತೇಕ ಕಡೆ ಗಾಳಿ ಸಹಿತ ಮಳೆಯಗಲಿದೆ. ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಆಗಸ್ಟ್ 21 ಮತ್ತು 22ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳ ನಾಡಿನ ಕಲಬುರಗಿ, ವಿಜಯಪುರ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು ಬಾಗಲಕೋಟೆ ,ಬೆಳಗಾವಿ ,ಬೀದರ್, ಧಾರವಾಡ ಹಾವೇರಿ ಕೊಪ್ಪಳ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದೆ.



















































































