
ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ತೀವ್ರಗೊಂಡಿದ್ದು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ರಾಯಚೂರು ಕೊಪ್ಪಳ ಜಿಲ್ಲೆಗಳಲ್ಲಿ ಗಾಳಿಯ ಜೊತೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು ದಾವಣಗೆರೆ ಚಿತ್ರದುರ್ಗ ತುಮಕೂರು ಜಿಲ್ಲೆಗಳಲ್ಲಿ ಹಳೆಯ ಸಾಧ್ಯತೆ ಇದೆ.
ನ. 5ವರೆಗೆ ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

























