
ನವೆಂಬರ್ 4 ಮತ್ತು 5 ರಂದು ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಮನಗರ ,ತುಮಕೂರು ,ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಯಾಗಲಿದ್ದು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೋಲಾರ ,ಚಿಕ್ಕಬಳ್ಳಾಪುರ, ರಾಮನಗರ ,ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ , ಚಿಕ್ಕಮಗಳೂರು ,ದಾವಣಗೆರೆ, ಹಾಸನ ,ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

























