
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ 30 ರಿಂದ 50 ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಮಳೆಯಾಗಲಿದೆ. ಕರಾವಳಿಯ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು ಮೀನುಗಾರರು ಕಡಲಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಬಾಗಲಕೋಟೆ ಬೆಳಗಾವಿ ಬೀದರ್ ಹಾವೇರಿ, ಕೊಪ್ಪಳ ರಾಯಚೂರು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.



















































































