
ರಾಜ್ಯದಲ್ಲಿ ನ. 12 ಮತ್ತು 13 ರಂದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ದಕ್ಷಿಣ ಕನ್ನಡ ,ಉಡುಪಿ ಉತ್ತರಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ,ಹಾವೇರಿ, ಕಲಬುರಗಿ, ಕೊಪ್ಪಳ ,ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.






















































































