
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು ಒಣಹವೆ ಮುಂದುವರಿಯಲಿದೆ.
ನವಂಬರ್ 20ರಂದು ಉಡುಪಿ,ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ಬೆಂಗಳೂರು,ಮೈಸೂರು, ಮಂಡ್ಯ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






















































































