
ರಾಜ್ಯದಲ್ಲಿ ಚಳಿಯ ಪ್ರಮಾಣ ಮುಂದುವರೆಯಲಿದ್ದು ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನವೆಂಬರ್ 24, 25 ರಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ನ. 24ರಂದು ಸಣ್ಣಗೆ ಮಳೆಯಾಗಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

























































































