
ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆಯ ವೇಳೆಗೆ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಬಳ್ಳಾರಿ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

























































































