
ರಾಜ್ಯದಲ್ಲಿ ನ. 27 ಮತ್ತು 28 ರಂದು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ,ಚಿಕ್ಕಮಗಳೂರು, ಹಾಸನ ,ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ನ.27 ಮತ್ತು ನವಂಬರ್ 28 ರಂದು ಸಾಧಾರಣ ಮಳೆಯಾಗಲಿದೆ.

























































































