
ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಗದಗ ,ಹಾವೇರಿ ,ಧಾರವಾಡ, ಬೆಳಗಾವಿ ,ಕೊಪ್ಪಳ ,ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

























































