28.3 C
Udupi
Tuesday, September 29, 2026
spot_img
spot_img
HomeBlogಹೆರ್ಮುಂಡೆ ಸ್ವರ್ಣ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಹೆರ್ಮುಂಡೆ ಸ್ವರ್ಣ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಕಾರ್ಕಳ, ಸೆ.29: ಹಿರ್ಗಾನ ಗ್ರಾಮದ ಹೆರ್ಮುಂಡೆಯ ಸ್ವರ್ಣ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಹಿರ್ಗಾನ ಗ್ರಾಮದ ಪೇಂಟಿಂಗ್ ವೃತ್ತಿಯ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ.

ಮಂಗಳವಾರ ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಭರತ್ ಹಾಗೂ ಹರ್ಷನ್ ಸೇರಿದಂತೆ ಐವರು ಸ್ನೇಹಿತರು ಮಧ್ಯಾಹ್ನ ಸ್ನಾನಕ್ಕಾಗಿ ಹೆರ್ಮುಂಡೆ ನದಿಗೆ ತೆರಳಿದ್ದರು. ಹಿರ್ಗಾನದ ಮಂಗಿಲಾರು ಎಂಬಲ್ಲಿಂದ ಸುಮಾರು 2 ಕಿ.ಮೀ. ದುರ್ಗಮ ದಾರಿಯಲ್ಲಿ ನಡೆದುಕೊಂಡು ನದಿಗೆ ತೆರಳಿದ್ದ ಅವರು ಈಜಾಟ ನಡೆಸುತ್ತಿದ್ದ ವೇಳೆ ಭರತ್ ಹಾಗೂ ಹರ್ಷನ್ ಆಕಸ್ಮಿಕವಾಗಿ ನದಿಯ ಆಳದ ಪ್ರದೇಶಕ್ಕೆ ತೆರಳಿದ್ದಾರೆ. ಈ ವೇಳೆ ಈಜಲು ಸಾಧ್ಯವಾಗದೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ವಾಹನ ಸಂಚಾರಕ್ಕೆ ಸೂಕ್ತ ದಾರಿ ಇಲ್ಲದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಸಲಕರಣೆಗಳೊಂದಿಗೆ ಸುಮಾರು 3 ಕಿ.ಮೀ. ದೂರ ಕಾಲ್ನಡಿಗೆಯಲ್ಲೇ ಸಾಗಬೇಕಾಯಿತು. ಸಿಬ್ಬಂದಿಗಳು ಸ್ಥಳಕ್ಕೆ ತಲುಪುವಷ್ಟರಲ್ಲಿ ಯುವಕರಿಬ್ಬರ ಶವಗಳು ನೀರಿನಾಳದಲ್ಲಿ ಸಿಲುಕಿಕೊಂಡಿದ್ದವು.

ಅಗ್ನಿಶಾಮಕ ದಳದ ಠಾಣಾಧಿಕಾರಿ ಸಂಜೀವ ದೇವಾಡಿಗ ಅವರ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಯಿತು.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ರೂಪೇಶ್, ಸುರೇಶ್, ನಿತ್ಯಾನಂದ, ದಿನೇಶ್, ಮುಜಾಮಿಲ್ ಹಾಗೂ ಚಾಲಕ ಶಿವಾನಂದ ಭಾಗವಹಿಸಿದ್ದರು.

ಘಟನೆಯಿಂದ ಹಿರ್ಗಾನ ಗ್ರಾಮದಲ್ಲಿ ಹಾಗೂ ಮೃತರ ಕುಟುಂಬಸ್ಥರಲ್ಲಿ ತೀವ್ರ ದುಃಖ ಆವರಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page