31 C
Udupi
Monday, September 28, 2026
spot_img
spot_img
HomeBlogಹೃದಯದ ಆರೋಗ್ಯದ ಸಂದೇಶ ಸಾರಿದ ಕಾರ್ಕಳದ ಬೃಹತ್ ವಾಕಥಾನ್ : 500ಕ್ಕೂ ಹೆಚ್ಚು ಮಂದಿ ಭಾಗಿ

ಹೃದಯದ ಆರೋಗ್ಯದ ಸಂದೇಶ ಸಾರಿದ ಕಾರ್ಕಳದ ಬೃಹತ್ ವಾಕಥಾನ್ : 500ಕ್ಕೂ ಹೆಚ್ಚು ಮಂದಿ ಭಾಗಿ

ಕಾರ್ಕಳ: ವಿಶ್ವ ಹೃದಯ ದಿನ 2026ರ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದ ವತಿಯಿಂದ ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ರೋಟರ್ಯಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಹಾಗೂ ರೋಟರ್ಯಾಕ್ಟ್ ಕ್ಲಬ್ ಸರ್ಕಾರಿ ಪಾಲಿಟೆಕ್ನಿಕ್, ಕಾರ್ಕಳ ಇವರ ಸಹಯೋಗದಲ್ಲಿ ಹೃದಯದ ಆರೋಗ್ಯದ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬೃಹತ್ ವಾಕ್‌ಥಾನ್ ಆಯೋಜಿಸಲಾಯಿತು. ಈ ವಾಕ್‌ಥಾನ್‌ನಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಹೃದಯದ ಆರೋಗ್ಯದ ಮಹತ್ವದ ಸಂದೇಶ ಸಾರಿದರು.

ರವಿವಾರ, ಸೆಪ್ಟೆಂಬರ್ 27ರಂದು ಬೆಳಿಗ್ಗೆ 7.30ಕ್ಕೆ ಕಾರ್ಕಳದ ಅನಂತಶಯನ ವೃತ್ತದಿಂದ ಆರಂಭಗೊಂಡ ವಾಕ್‌ಥಾನ್‌ಗೆ ಕಾರ್ಕಳದ ಶಾಸಕರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಚಾಲನೆ ನೀಡಿದರು. ವಾಕ್‌ಥಾನ್ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯವರೆಗೆ ನಡೆಯಿತು.

ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ರೋಟರಿ ಮತ್ತು ರೋಟರ್ಯಾಕ್ಟ್ ಸದಸ್ಯರು ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಪಾಲ್ಗೊಂಡರು. ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಬೀದಿನಾಟಕವೂ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.

ನಂತರ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರಾದ ಡಾ. ಕಾರ್ತಿಕ್ ರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ರಕ್ತದಲ್ಲಿನ ಸಕ್ಕರೆ ಪ್ರಮಾಣದ ನಿಯಂತ್ರಣ, ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ, ಒತ್ತಡದ ನಿರ್ವಹಣೆ ಹಾಗೂ ಉತ್ತಮ ಗುಣಮಟ್ಟದ ನಿದ್ರೆಯು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. “ನಮ್ಮ ಆರೋಗ್ಯ, ನಮ್ಮ ಹೊಣೆ” ಎಂಬುದನ್ನು ಅವರು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಅಸಿಸ್ಟೆಂಟ್ ಗವರ್ನರ್, ಪಿಎಚ್‌ಎಫ್ ರೋಟೇರಿಯನ್ ಸುರೇಶ್ ನಾಯಕ್ ಅವರು, ಹೃದಯ ಸಂಬಂಧಿ ಕಾಯಿಲೆಗಳ ಕುರಿತು ಜನಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ಈ ವಾಕ್‌ಥಾನ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ವಾಕ್‌ಥಾನ್‌ನ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರಿಯೇಟಿವ್ ಪಿ.ಯು. ಕಾಲೇಜು, ಕಾರ್ಕಳ ಗರಿಷ್ಠ ಭಾಗವಹಿಸುವಿಕೆ ಹಾಗೂ ಘೋಷವಾಕ್ಯ ಕೂಗುವ ಸ್ಪರ್ಧೆಯಲ್ಲಿ ಪ್ರಥಮ, ಫಲಕ ತಯಾರಿಕೆ ಹಾಗೂ ಬೀದಿನಾಟಕದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಗರಿಷ್ಠ ಭಾಗವಹಿಸುವಿಕೆ ಹಾಗೂ ಘೋಷವಾಕ್ಯ ಕೂಗುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯಿತು. ಎಂ.ಪಿ.ಎಂ. ಕಾಲೇಜು, ಕಾರ್ಕಳ ಫಲಕ ತಯಾರಿಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸರ್ಕಾರಿ ಪಾಲಿಟೆಕ್ನಿಕ್, ಕಾರ್ಕಳ ಶಿಸ್ತುಬದ್ಧ ತಂಡದಲ್ಲಿ ಪ್ರಥಮ ಸ್ಥಾನ ಹಾಗೂ ಸರಕಾರಿ ನರ್ಸಿಂಗ್ ಕಾಲೇಜು, ಕಾರ್ಕಳ ಬೀದಿನಾಟಕದಲ್ಲಿ ಪ್ರಥಮ ಮತ್ತು ಶಿಸ್ತುಬದ್ಧ ತಂಡದಲ್ಲಿ ದ್ವಿತೀಯ ಸ್ಥಾನ ಗಳಿಸಿತು. ಆಸ್ಪತ್ರೆಯ ಸಿಬ್ಬಂದಿಗೆ ಆಯೋಜಿಸಿದ್ದ ಪೋಸ್ಟರ್ ತಯಾರಿಕೆ ಸ್ಪರ್ಧೆಯಲ್ಲಿ ನರ್ಸಿಂಗ್ ತಂಡ ಪ್ರಥಮ ಹಾಗೂ ಹೌಸ್‌ಕೀಪಿಂಗ್ ತಂಡ ದ್ವಿತೀಯ ಸ್ಥಾನ ಪಡೆಯಿತು.

ಕಾರ್ಯಕ್ರಮದಲ್ಲಿ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಸಂಜಯ್ ಕುಮಾರ್, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿಯ ಅಧ್ಯಕ್ಷರಾದ Rtn. ಮಂಜುನಾಥ್ ಹೆಗ್ಡೆ, ರೋಟರ್ಯಾಕ್ಟ್ ಕ್ಲಬ್‌ಗಳ ಅಧ್ಯಕ್ಷರಾದ Rtr. ಸುಜನ್ ಮತ್ತು Rtr. ಶ್ರೀನಿವಾಸ್ ಭಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಲಾದ ಈ ವಾಕ್‌ಥಾನ್ ಸಾರ್ವಜನಿಕರಲ್ಲಿ ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮಹತ್ವದ ಸಂದೇಶವನ್ನು ಸಾರಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page