
ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು ನೆರವೇರಿಸಿದರು. ಮುಖ್ಯೋಪಾಧ್ಯಾಯರಾದ ಡಾ. ಶಂಕರನ್ ಪಿ. ರವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜೇಸಿ ಪದ್ಮಪ್ರಸಾದ್ ಜೈನ್, ಜೇಸಿ ಡಾ. ಮುರಳೀಧರ್ ಭಟ್, ಜೇಸಿಐ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ, ಜೇಸಿ ದಿನೇಶ್ ಕೆ., ಜೇಸಿ ಜಯಕುಮಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಮಮತಾ, ಶಾಲಾ ಆಡಳಿತಾಧಿಕಾರಿ ಪ್ರಣೀತ್ ಹಾಗೂ ಜೇಸಿಐನ ಸದಸ್ಯರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಧ್ವಜವಂದನೆಯನ್ನು ವಿಧಿತ್ ನಿರ್ವಹಿಸಿದರು. ಕು. ಶ್ರಾವಣಿಯವರು ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಅರ್ಚನಾ ರವರು ವಂದಿಸಿದರು.













































































































