

ಕಾರ್ಕಳ: ಕರ್ನಾಟಕ ಸರ್ಕಾರ, ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ವತಿಯಿಂದ ಆಯೋಜಿಸಲಾದ 2026-27ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಅಂಗವಾಗಿ ದಿನಾಂಕ 30.10.2026ರಂದು ಜಿಲ್ಲಾ ಈಜುಕೊಳದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ವರ್ಧಮಾನ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅನ್ವಿ ಕೋಟ್ಯಾನ್ (6ನೇ ತರಗತಿ) :
50 ಮೀ. ಬ್ರೆಸ್ಟ್ಸ್ಟ್ರೋಕ್ನಲ್ಲಿ ಪ್ರಥಮ,
200 ಮೀ. ಫ್ರೀಸ್ಟೈಲ್ನಲ್ಲಿ ದ್ವಿತೀಯ,
100 ಮೀ. ಬ್ರೆಸ್ಟ್ಸ್ಟ್ರೋಕ್ನಲ್ಲಿ ತೃತೀಯ ಹಾಗೂ
4 × 100 ಮೀ. ಮೆಡ್ಲೆ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಆದ್ಯಶ್ರೀ (6ನೇ ತರಗತಿ) :
100 ಮೀ. ಬ್ಯಾಕ್ಸ್ಟ್ರೋಕ್ನಲ್ಲಿ ಪ್ರಥಮ,
50 ಮೀ. ಬ್ಯಾಕ್ಸ್ಟ್ರೋಕ್ನಲ್ಲಿ ದ್ವಿತೀಯ ಹಾಗೂ
4 × 100 ಮೀ. ಮೆಡ್ಲೆ ರಿಲೇಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಎಲಿಷಾ ಆಳ್ವ (6ನೇ ತರಗತಿ) :
200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಪ್ರಥಮ,
100 ಮೀ. ಬ್ಯಾಕ್ಸ್ಟ್ರೋಕ್ನಲ್ಲಿ ದ್ವಿತೀಯ,
100 ಮೀ. ಫ್ರೀಸ್ಟೈಲ್ನಲ್ಲಿ ತೃತೀಯ ಹಾಗೂ
4 × 100 ಮೀ. ಮೆಡ್ಲೆ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ವೀಕ್ಷಿತಾ ಎ. ಜೈನ್ (7ನೇ ತರಗತಿ) :
4 × 100 ಮೀ. ಮೆಡ್ಲೆ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತಂಡದ ಗೆಲುವಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.
ಅದೇ ರೀತಿ,
ಮೊಹಮ್ಮದ್ ಶಾಹೀನ್ ಶಾಜ್ (8ನೇ ತರಗತಿ) :
14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ
100 ಮೀ. ಫ್ರೀಸ್ಟೈಲ್ನಲ್ಲಿ ಪ್ರಥಮ,
50 ಮೀ. ಫ್ರೀಸ್ಟೈಲ್ನಲ್ಲಿ ದ್ವಿತೀಯ ಹಾಗೂ
100 ಮೀ. ಬ್ಯಾಕ್ಸ್ಟ್ರೋಕ್ನಲ್ಲಿ ದ್ವಿತೀಯ ಸ್ಥಾನ ಪಡೆದು ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯು ಅವರ ನಿರಂತರ ಅಭ್ಯಾಸ, ಪರಿಶ್ರಮ, ಶಿಸ್ತು ಹಾಗೂ ಕ್ರೀಡಾ ಬದ್ಧತೆಗೆ ಸಾಕ್ಷಿಯಾಗಿದೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಶಶಿಕಲಾ ಕೆ. ಹೆಗ್ಡೆ, ಶ್ರೀ ಕುಮಾರಯ್ಯ ಹೆಗ್ಡೆ, ಆಡಳಿತಾಧಿಕಾರಿ ಶ್ರೀಮತಿ ಕರ್ತವ್ಯ ಜೈನ್, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ, ಮುಂದಿನ ಕ್ರೀಡಾ ಸ್ಪರ್ಧೆಗಳಲ್ಲಿಯೂ ಹೆಚ್ಚಿನ ಯಶಸ್ಸು ಗಳಿಸುವಂತೆ ಶುಭ ಹಾರೈಸಿದರು.

























