32.4 C
Udupi
Monday, November 23, 2026
spot_img
spot_img
HomeBlogಜಿಲ್ಲಾಧಿಕಾರಿ ಮತ್ತು ಶಾಸಕರ ಉಪಸ್ಥಿತಿಯಲ್ಲಿ, ಕಾರ್ಕಳ ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ

ಜಿಲ್ಲಾಧಿಕಾರಿ ಮತ್ತು ಶಾಸಕರ ಉಪಸ್ಥಿತಿಯಲ್ಲಿ, ಕಾರ್ಕಳ ಐತಿಹಾಸಿಕ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ

ಐತಿಹಾಸಿಕ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಮಾಜಿ ಸಚಿವರು, ಶಾಸಕರಾದ ವಿ. ಸುನಿಲ್ ಕುಮಾರ್ ಸೂಚಿಸಿದರು.

ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆ ಕುರಿತು ಸೋಮವಾರ ತಾ.ಪಂ. ಸಭಾಂಗಣದಲ್ಲಿ ನಡೆದ ಸರ್ಕಾರಿ ಮಟ್ಟದ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಸಹಾಯಕ ಆಯುಕ್ತ ಮಹೇಶ್ ಎಸ್., ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹೋತ್ಸವದ ಸಂದರ್ಭದಲ್ಲಿ ಕಾರ್ಕಳ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಂಚಾರ ವ್ಯವಸ್ಥೆಗೆ ವಿಶೇಷ ಯೋಜನೆ ರೂಪಿಸಬೇಕು. ಬಸ್ ಸಂಚಾರ, ಬಸ್ ನಿಲ್ದಾಣ ಹಾಗೂ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು. ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ ಪೊಲೀಸ್, ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಕೇಂದ್ರ ಗೃಹ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿ ಆಗಮಿಸುವ ಸಾಧ್ಯತೆಯಿರುವುದರಿಂದ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗೆ ಪುರಸಭೆಯಿಂದ ಸುಮಾರು 100 ತಾತ್ಕಾಲಿಕ ಕಾರ್ಮಿಕರನ್ನು ನಿಯೋಜಿಸಬೇಕು. ಎಸ್‌ಎಲ್‌ಆರ್‌ಎಂ ಘಟಕ ಹಾಗೂ ಗ್ರಾಮ ಪಂಚಾಯತ್‌ಗಳ ಸಹಕಾರ ಪಡೆಯಬೇಕು. ಸುಮಾರು 110 ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ನಿರಂತರ ಸ್ವಚ್ಛತೆ ಮತ್ತು ನಿರ್ವಹಣೆಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಭಕ್ತರಿಗೆ ನಿರಂತರ ಕುಡಿಯುವ ನೀರು ಪೂರೈಸಲು ಮುಂಡ್ಲಿಯಿಂದ ನೀರು ತರುವ ಕಾಮಗಾರಿ ಪೂರ್ಣಗೊಳಿಸಬೇಕು. ಆರು ಖಾಸಗಿ ಬಾವಿಗಳ ನೀರನ್ನೂ ಬಳಸಿಕೊಳ್ಳಬೇಕು. ಪಾರ್ಕಿಂಗ್ ಹಾಗೂ ಜನಸಂದಣಿ ಪ್ರದೇಶಗಳಲ್ಲಿ 5 ಸಾವಿರದಿಂದ 15 ಸಾವಿರ ಲೀಟರ್ ಸಾಮರ್ಥ್ಯದ ತಾತ್ಕಾಲಿಕ ನೀರಿನ ಟ್ಯಾಂಕ್‌ಗಳನ್ನು ಅಳವಡಿಸುವ ಬಗ್ಗೆ ಪರಿಶೀಲಿಸಬೇಕು. ಪುರಸಭೆ ಹಾಗೂ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ವ್ಯವಸ್ಥೆಯ ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ಎರಡು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಿ, ಐದು ಆಂಬುಲೆನ್ಸ್‌ಗಳನ್ನು ಸಿದ್ಧವಾಗಿಡಬೇಕು. ಮೂರು ಪಾಳಿಗಳಲ್ಲಿ ಸಿಬ್ಬಂದಿ ನಿಯೋಜಿಸಿ 24 ಗಂಟೆಯೂ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ಸೇವೆ ಒದಗಿಸಬೇಕು. ಅಗ್ನಿಶಾಮಕ ಇಲಾಖೆಯಿಂದ ಬೆಂಗಳೂರಿನಿಂದ ಹೆಚ್ಚುವರಿ ನಾಲ್ಕು ವಾಹನಗಳನ್ನು ತರಿಸಿಕೊಳ್ಳಬೇಕು. ತುರ್ತು ಸಂದರ್ಭಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಮಹೋತ್ಸವದ ಪ್ರಮುಖ ದಿನಗಳಾದ 24, 25 ಮತ್ತು 26ರಂದು ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಬೇಕು. ಶಾಲಾ-ಕಾಲೇಜುಗಳ ಸಹಕಾರದೊಂದಿಗೆ ಮಕ್ಕಳ ಕಾರ್ಯಕ್ರಮಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳು ವಸ್ತುಪ್ರದರ್ಶನ ಆಯೋಜಿಸಬೇಕು. ಮೆಸ್ಕಾಂನ ನಿಟ್ಟೆ ಮತ್ತು ಕಾರ್ಕಳ ವಿಭಾಗದ ಎಇಇಗಳು ಜಂಟಿಯಾಗಿ ಬೀದಿದೀಪ ಹಾಗೂ ವಿದ್ಯುತ್ ವ್ಯವಸ್ಥೆ ಪರಿಶೀಲಿಸಬೇಕು ಎಂದರು.

ಪ್ರತಿಯೊಂದು ಇಲಾಖೆಯೂ ಪ್ರತ್ಯೇಕವಾಗಿ ಸಿದ್ಧತೆ ಪರಿಶೀಲಿಸಿ, ವಾರಕ್ಕೊಮ್ಮೆ ಎಲ್ಲ ಇಲಾಖೆಗಳ ಸಮನ್ವಯ ಸಭೆ ನಡೆಸಬೇಕು. ಮುಂದಿನ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಯೋಜನೆ ಹಾಗೂ ಸಿದ್ಧತೆಗಳ ವಿವರದೊಂದಿಗೆ ಹಾಜರಾಗಬೇಕು. ಯಾವುದೇ ಹಂತದಲ್ಲಿ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, 12 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹೋತ್ಸವವನ್ನು ಯಶಸ್ವಿಗೊಳಿಸಲು ಸರಕಾರ, ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಪ್ರತಿಯೊಂದು ಇಲಾಖೆಯೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿ, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಮಹೋತ್ಸವ ಆರಂಭಕ್ಕೂ ಮುನ್ನ ಎಲ್ಲ ಮೂಲಸೌಕರ್ಯ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಸಿದ್ಧಪಡಿಸಬೇಕು. ಪ್ರತಿಯೊಂದು ಇಲಾಖೆಯೂ ತನ್ನ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಮಹೋತ್ಸವದ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ದೊಡ್ಡ ಸವಾಲಾಗಲಿದ್ದು, ನಾಲ್ಕು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದರು.

ಸಭೆಯಲ್ಲಿ ಮಹಾಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್, ಸಹಾಯಕ ಆಯುಕ್ತ ಮಹೇಶ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕಿ ಚೇತನಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page