
ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಾರಾವಳಿ ರಂಗಾಯಣ, ಕಾರ್ಕಳ ಇವರ ವತಿಯಿಂದ ದಿನಾಂಕ ಅಕ್ಟೋಬರ್ 12, 2026 ರಂದು ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರಿಂದ ‘ಕುಮಾರವ್ಯಾಸ ಭಾರತದ ಸಭಾಪರ್ವ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ಉಪನ್ಯಾಸ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.






















