
ಕಾರ್ಕಳ: ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ಬಳಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕಾರ್ಕಳ ಗ್ರಾಮಾಂತರ ಠಾಣೆಯ ಎಸ್ಐ ಪ್ರಸನ್ನ ಎಂ.ಎಸ್. ನೇತೃತ್ವದ ಪೊಲೀಸರ ತಂಡ ಗುರುವಾರ ರಾತ್ರಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹರೀಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿ ಅವರು ಸರ್ಕಾರಕ್ಕೆ ರಾಜಧನ ಪಾವತಿಸದೆ ರಾತ್ರಿ ವೇಳೆ ಸ್ಫೋಟಕ ಬಳಸಿ ಕಲ್ಲುಗಳನ್ನು ಪುಡಿ ಮಾಡಿ ಕೇರಳಕ್ಕೆ ಜಲ್ಲಿ ಸಾಗಿಸುತ್ತಿದ್ದರು ಎಂಬ ಎಂಬ ಮಾಹಿತಿ ಮೇರೆಗೆ ಪೊಲೀಸರ ತಂಡವು ದಾಳಿ ನಡೆಸಿದ್ದು ಈ ವೇಳೆ ಜಲ್ಲಿ ಸಾಗಾಟಕ್ಕೆ ಬಳಸುತ್ತಿದ್ದ ಎರಡು ಟಿಪ್ಪರ್ ಲಾರಿ ಹಾಗೂ ಹಿಟಾಚಿ ಯಂತ್ರವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.




































