ಸಾಣೂರಿನ ಯುವಕ ಸ್ಥಳದಲ್ಲೇ ಸಾವು

ಕಾರ್ಕಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಸಾಣೂರಿನ ಕುಜ್ಮಾರ್ ಗುಡ್ಡೆ ನಿವಾಸಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತರನ್ನು ಸಾಣೂರಿನ ಕೆಪುಲ್ ನಿವಾಸಿ ವಿಘ್ನೇಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಬೈಪಾಸ್ ಕಡೆ ತೆರಳುತ್ತಿದ್ದ ಲಾರಿಗೆ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.






















