24.5 C
Udupi
Wednesday, September 2, 2026
spot_img
spot_img
HomeBlogಕಾರ್ಕಳ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ನೂತನ ಕಬ್ ಬುಲ್ ಬುಲ್ ಘಟಕ ಉದ್ಘಾಟನೆ

ಕಾರ್ಕಳ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ನೂತನ ಕಬ್ ಬುಲ್ ಬುಲ್ ಘಟಕ ಉದ್ಘಾಟನೆ

ಕಾರ್ಕಳ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ಆಗಸ್ಟ್ 31ರಂದು ಭಾರತ್ ಸ್ಕೌಟ್ ಮತ್ತು ಗೈಡ್ ಇದರ ಕಬ್ಸ್ ಮತ್ತು ಬುಲ್ ಬುಲ್ ನೂತನ ಘಟಕದ ಉದ್ಘಾಟನಾ ಸಮಾರಂಭವು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಗೈಡ್ಸ್ ಕಾರ್ಕಳ ಘಟಕದ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಜೆ ಪೈ ವಹಿಸಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಬ್ ಬುಲ್ಬುಲ್ ಮಕ್ಕಳು ವೇದಿಕೆಯಲ್ಲಿ ಉಪಸಿತರಿದ್ದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾಡುತ್ತಾ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಜೀವನದಲ್ಲಿ ಶಿಸ್ತು ಮತ್ತು ದೇಶಪ್ರೇಮ ಮೂಡಿಸುವಲ್ಲಿ ಸ್ಕೌಟ್ಸ್ ಗೈಡ್ಸ್ ಸಹಕಾರಿಯಾಗಿದೆ. ಇದು ವಿದ್ಯಾರ್ಥಿಗಳ ಎಳೆಯ ವಯಸ್ಸಿನಲ್ಲೇ ಮಾರ್ಗದರ್ಶನ ಮಾಡಬೇಕು. ಈ ನಿಟ್ಟಿನಲ್ಲಿ ಕಬ್ ಬುಲ್ ಬುಲ್ ಬಹಳಷ್ಟು ಸಹಕಾರಿಯಾಗಿದೆ ಎಂದು ಹೇಳಿದರು. ಬಳಿಕ ಅಭಿನಯ ಗೀತೆಯ ಮೂಲಕ ವಿದ್ಯಾರ್ಥಿಗಳ ಮನ ರಂಜಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಸಂಚಾಲಕ ಶ್ರೀ ನರೇಂದ್ರ ಕಾಮತ್ ಕೆ ಮಾತಾಡುತ್ತಾ ಭಾರತ್ ಸ್ಕೌಟ್ಸ್ ಗೈಡ್ಸ್ ಚಳುವಳಿಯು ಇಂದು ವಿದ್ಯಾರ್ಥಿಗಳಿಗೆ ನಾಯಕತ್ವ , ಸ್ವಾವಲಂಬನೆ ಬದುಕು ಮತ್ತು ಪ್ರಕೃತಿ ಬಗ್ಗೆ ಪ್ರೀತಿಯನ್ನು ಮೂಡಿಸುವ ಬಗೆಯನ್ನು ಹೇಳಿಕೊಡುತ್ತಿದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಒಳ್ಳೆಯ ಮುನ್ನುಡಿಯನ್ನು ಬರೆಸಿದಂತೆ ಎಂದು ಹೇಳಿದರು . ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾರ್ಕಳ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್ ಉಪಸ್ಥಿತರಿದ್ದು ಮಕ್ಕಳಿಗೆ ನೀತಿಯುತ ಮೌಲ್ಯದ ಕಥೆಗಳನ್ನು ಹೇಳಿದರು. ಸ್ಥಳೀಯ ಸಂಸ್ಥೆ ಸಹಾಯಕ ಜಿಲ್ಲಾ ಕಮಿಷನರ್ ಬೋಳ ಗೀತಾ ಸುಧೀರ್ ಕಾಮತ್ ಶ್ರೀಮದ್ ಭುವನೇಂದ್ರ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ , ಗೈಡ್ ಶಿಕ್ಷಕಿ ಕಾರ್ಕಳ ಘಟಕದ ಜೊತೆ ಕಾರ್ಯದರ್ಶಿ ಸೀಮಾ ಕಾಮತ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಸಹಾಯಕ ಜಿಲ್ಲಾ ಕಮಿಷನರ್ ವಿದ್ಯಾ ಕಿಣಿಯವರು ಎಲ್ಲರನ್ನು ಸ್ವಾಗತಿಸಿದರು. ಸ್ಕೌಟ್ ಶಿಕ್ಷಕ ಕಾರ್ಕಳ ಘಟಕದ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ರಂಜಿತಾ ಕಬ್ ಬುಲ್ ಬುಲ್ ನಿಯಮವನ್ನು ವಾಚಿಸಿದರು.

ಶಿಕ್ಷಕಿ ಸವಿತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ವೇತಾ ಭಟ್ ಧನ್ಯವಾದವಿತ್ತರು. ಶಿಕ್ಷಕಿ ಸ್ನೇಹ ಲೋನ್ಡೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಕಬ್ ಬುಲ್ ಬುಲ್ ಶಿಕ್ಷಕರು ವಿದ್ಯಾರ್ಥಿ ಪೋಷಕರು ಶಾಲಾ ಶಿಕ್ಷಕರು ಶಿಕ್ಷಕೇತರ ಬಂಧುಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಐಕ್ಯ ಮಂತ್ರ ಮೂಲಕ ಕಾರ್ಯಕ್ರಮ ಸಮಾಪನಗೊಂಡಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page