
ಕಾರ್ಕಳ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಆ.16ರಂದು ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಬಳಿಯಿರುವ ವಿ. ವನ್. ಅಕ್ವಾ ಸೆಂಟರ್‌ನ ಸುಮಾರು 12 ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ತರಬೇತುದಾರ ಗಣೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಒಟ್ಟು 15 ಚಿನ್ನದ ಪದಕ, 11 ಬೆಳ್ಳಿ ಪದಕ ಹಾಗೂ 7 ಕಂಚಿನ ಪದಕ ಸೇರಿದಂತೆ ಒಟ್ಟು 33 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಸಾಧಕ ಈಜು ಪಟುಗಳನ್ನು ಸಂಸ್ಥೆಯ ನಿರ್ದೇಶಕರಾದ ನವೀನ್ ಹಾಗೂ ರೂಪಾ ಜಿ. ಪ್ರಭು ಅಭಿನಂದಿಸಿದ್ದಾರೆ.



















































































