
ಕಾರ್ಕಳ: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ
ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಶ್ರೀ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್ ಎಲ್, ಡಾ.ಗಣನಾಥ್ ಶೆಟ್ಟಿ ಬಿ,
ಗಣಪತಿ ಭಟ್ ಕೆ ಎಸ್ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ
ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಶ್ರೀ ವಿದ್ವಾನ್ ಗಣಪತಿ ಭಟ್ ಅವರು “ಗಾಂಧೀಜಿಯವರ ಸತ್ಯ, ಅಹಿಂಸೆ,
ಸ್ವಚ್ಛತೆಯ ತತ್ವಗಳು ಇಂದಿಗೂ ಪ್ರಸ್ತುತ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಚಳುವಳಿಗೆ ಹೊಸ ಅರ್ಥವನ್ನು
ತಂದುಕೊಟ್ಟಿದ್ದರು. ಎಲ್ಲರೂ ಗೌರವಿಸುವ ಮತ್ತು ಪ್ರೀತಿಸುವ ಮಹಾಚೇತನ. ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಸರಳತೆ ಮತ್ತು
ಆಡಳಿತ ವೈಖರಿ ಎಲ್ಲ ಕಾಲಕ್ಕೂ ಅನುಕರಣೀಯ.” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು, ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್
ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.






















