
ಪಿ.ಎಂ. ಶ್ರೀ ಕೆ.ಪಿ.ಎಸ್. ಕೂಡಬೆಟ್ಟುಮಾಳ ಶಾಲೆಯಲ್ಲಿ ಕಾರ್ಕಳ ಮೊಬೈಲ್ ರೀಟೇಲರ್ಸ್ ಅಸೋಸಿಯೇಷನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಯೂನಿಯನ್ ಅಧ್ಯಕ್ಷರಾದ ಅಜಿತ್ ಕುಮಾರ್ ಹಾಗೂ ಬೋರ್ಡ್ ಕಮಿಟಿ ಸದಸ್ಯರಾದ ಶಿವರಾಜ್, ತೌಫಿಕ್ ಮತ್ತು ರೋಷನ್ ಭಾಗವಹಿಸಿದ್ದರು. ಯೂನಿಯನ್ ವತಿಯಿಂದ ಶಾಲೆಯ ಸುಮಾರು 190 ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ರಾಧಾಕೃಷ್ಣ ಸರ್ ಅವರು ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿರುವ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ವೇದಿಕೆಗೆ ಅಗತ್ಯವಿರುವ ಪೋಡಿಯಂ ಒದಗಿಸುವಂತೆ ಶಾಲಾ ಆಡಳಿತ ಮಂಡಳಿಯವರು ಮನವಿ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಪೋಡಿಯಂ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಯೂನಿಯನ್‌ನ ಎಲ್ಲಾ ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.



































































































